ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಪ್ರತಿ ಕುಟುಂಬಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಸರ್ಕಾರ ಉದ್ದೇಶಿಸಿದೆ. 1.14 ಕೋಟಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಒಂದು ಕೆಜಿ ಅಕ್ಕಿ ಹೆಚ್ಚುವರಿಯಾಗಿ ನೀಡಲಾಗುತ್ತದೆ ಏಪ್ರಿಲ್ 1 ರಿಂದ ಯೋಜನೆ ಜಾರಿಗೆ ಬರಲಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಸಭೆ ಅಧಿವೇಶನದಲ್ಲಿ ಭಾಷಣ ಮಾಡಿ, ಸರ್ಕಾರದ ಮುನ್ನೋಟದ ತೀರ್ಮಾನ ಪ್ರಕಟಿಸಿದ್ದಾರೆ. ಆದ್ಯತಾ ಪಡಿತರ ಚೀಟಿ ಹೊಂದಿರುವ ಕುಟುಂಬಕ್ಕೆ ಪ್ರತಿ ತಿಂಗಳು 5 ಕೆಜಿ ಅಕ್ಕಿ ನೀಡುತ್ತಿದ್ದು, ಹೆಚ್ಚುವರಿಯಾಗಿ 1 ಕೆಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ ಎಂದು ಹೇಳಿದ್ದಾರೆ.