ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಎಲ್ಲಾ ಚಿಕಿತ್ಸೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಕಟ್ಟಕಡೆಯ ವ್ಯಕ್ತಿಗೂ ಉಚಿತವಾಗಿ ಚಿಕಿತ್ಸೆ ಸಿಗಬೇಕೆಂಬುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆಶಯವಾಗಿದೆ. ಬಿಪಿಎಲ್ ಕಾರ್ಡ್ ದಾರರಿಗೆ ಎಲ್ಲಾ ಚಿಕಿತ್ಸೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ವಿಮೆ ಯೋಜನೆ ಯೋಜನೆಗಳಡಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಕೊರೋನಾ ವಾರಿಯರ್ಸ್ ಗೆ ವಿಶೇಷ ಭತ್ತೆ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.