ಬೆಂಗಳೂರು: ರಾಜ್ಯದಲ್ಲಿ 2.28 ಲಕ್ಷ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್. ರಮೇಶ್ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಅನರ್ಹರು ಪಡೆದುಕೊಂಡಿದ್ದರೆ, 2,28,188 ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಅರ್ಹತೆ ಇಲ್ಲದಿದ್ದರೂ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದವರಿಂದ 3.07 ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ 10.90 ಲಕ್ಷ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳಿವೆ. 1.16 ಕೋಟಿ ಬಿಪಿಎಲ್ ಪಡಿತರ ಚೀಟಿಗಳಿದ್ದು, ಅನರ್ಹರ ಪಡಿತರ ಚೀಟಿಗಳನ್ನು ಪತ್ತೆ ಮಾಡಲು ಮಾನದಂಡ ನಿಗದಿಪಡಿಸಲಾಗಿದೆ. ಅದರಂತೆ ಪತ್ತೆ ಕಾರ್ಯ ನಡೆಯುತ್ತಿದ್ದು, ಅನರ್ಹರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದರೆ ಅವುಗಳನ್ನು ರದ್ದುಪಡಿಸಿ ದಂಡ ಹಾಕಲಾಗುವುದು ಎಂದು ಹೇಳಿದ್ದಾರೆ.