ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ನೀಡಿರುವ ಪಡಿತರ ಚೀಟಿಗಳ ನಿಯಮದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲವೆಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಹೇಳಿದ್ದಾರೆ.
ವಿಧಾನಪರಿಷತ್ ನನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ನ ಪಿ.ಆರ್. ರಮೇಶ್ ಮತ್ತು ಬಿ.ಕೆ. ಹರಿಪ್ರಸಾದ್ ಅವರ ಪ್ರತ್ಯೇಕ ಪ್ರಶ್ನೆಗಳಿಗೆ ಪ್ರತ್ಯೇಕ ಉತ್ತರ ನೀಡಿದ ಸಚಿವರು, ಬಿಪಿಎಲ್ ಕಾರ್ಡ್ ದಾರರ ನಿಯಮ ಬದಲಾವಣೆ ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.
ಬಿಪಿಎಲ್ ಪಡಿತರ ಚೀಟಿದಾರರಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ 2017 ರಲ್ಲಿ ಹೊರಡಿಸಲಾಗಿದ್ದ ಆದೇಶವನ್ನು ಮುಂದುವರೆಸಲಾಗಿದೆ. ಸರ್ಕಾರಿ, ಅರೆ ಸರ್ಕಾರಿ, ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದರೆ ಮಾರ್ಚ್ 31 ರೊಳಗೆ ಹಿಂತಿರುಗಿಸುವಂತೆ ಗಡುವು ನೀಡಲಾಗಿದೆ. ಆಹಾರ ಇಲಾಖೆಯಿಂದ ಪತ್ತೆ ಕಾರ್ಯ ಮುಂದುವರೆಯಲಿದೆ. ಅನರ್ಹರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದರೆ ದಂಡದ ಜೊತೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.