ಬೆಳಗಾವಿ: ಮಾನದಂಡ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದವರ ಬಗ್ಗೆ ಸರ್ವೇ ಕಾರ್ಯ ಕೈಗೊಳ್ಳಲಾಗಿದೆ. ಮಾರ್ಚ್ 31 ರೊಳಗೆ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ.
ಬಿಪಿಎಲ್ ಕಾರ್ಡ್ ಪಡೆಯಲು ಇರುವ ನಿಯಮಗಳನ್ನು ಉಲ್ಲಂಘಿಸಿ ಅನೇಕರು ಕಾರ್ಡ್ ಪಡೆದುಕೊಂಡಿದ್ದರೆ ಅಂತಹ ಕಾರ್ಡ್ ದಾರರನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅನರ್ಹರು ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಿದ್ದರೆ ಅಧಿಕಾರಿಗಳು ಪರಿಶೀಲನೆ ನಡೆಸಿ ಮಾಹಿತಿ ಪಡೆಯಲಿದ್ದು, ಅಂತಹ ಪಡಿತರ ಚೀಟಿ ರದ್ದು ಮಾಡಲಾಗುವುದು. ಅರ್ಹರಿಗೆ ಮಾತ್ರ ಬಿಪಿಎಲ್ ಕಾರ್ಡ್ ಸೌಲಭ್ಯ ಸಿಗಲಿದೆ ಎಂದು ತಿಳಿಸಿದ್ದಾರೆ.