ಶಿವಮೊಗ್ಗ: ಕೊರೋನಾದಿಂದಾಗಿ ಸಂಕಷ್ಟಕ್ಕೆ ಒಳಗಾದ ಬಿಪಿಎಲ್ ಕುಟುಂಬದವರಿಗೆ ದಿನಸಿ ಕಿಟ್ ನೀಡಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ.
ಈಗಾಗಲೇ ದಿನಸಿ ಕಿಟ್ ಗಳನ್ನು ಸಿದ್ಧಪಡಿಸಲಾಗಿದ್ದು, ಬುಧವಾರ 12 ಗಂಟೆಗೆ ಮಹಾನಗರ ಪಾಲಿಕೆ ಆವರಣದಲ್ಲಿ ಸಾಂಕೇತಿಕವಾಗಿ ಕಿಟ್ ವಿತರಣೆ ಕಾರ್ಯಕ್ಕೆ ಚಾಲನೆ ನೀಡುವುದಾಗಿ ಮೇಯರ್ ಸುನಿತಾ ಅಣ್ಣಪ್ಪ ತಿಳಿಸಿದ್ದಾರೆ.
46, 500 ಆಹಾರದ ಕಿಟ್ ಗಳನ್ನು ಬಡ ಕುಟುಂಬದವರಿಗೆ ನೀಡಲು 2.10 ಕೋಟಿ ರೂಪಾಯಿ ಕಾಯ್ದಿರಿಸಲಾಗಿದೆ. ಕೊರೋನಾ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಸಂಕಷ್ಟಕ್ಕೆ ಒಳಗಾದ ಬಡವರನ್ನು ಗುರುತಿಸಿ ಮಹಾನಗರ ಪಾಲಿಕೆಯ ಆರೋಗ್ಯ ನಿಧಿಯಲ್ಲಿ ತಲಾ 25 ಸಾವಿರ ರೂಪಾಯಿ ನೀಡಲು ನಿರ್ಧರಿಸಲಾಗಿದೆ ಎಂದು ಮೇಯರ್ ತಿಳಿಸಿದ್ದಾರೆ.