
ಕಲಬುರಗಿ: ನನಗೂ ಆಪರೇಷನ್ ಕಮಲ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ ಎಂದು ಮುಖ್ಯಮಂತ್ರಿ ಸಲಹೆಗಾರ ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ನನ್ನನ್ನು ಸಂಪರ್ಕಿಸಿ ಆಫರ್ ನೀಡಲಾಗಿತ್ತು. ಚುನಾವಣೆಯ ಖರ್ಚು ಮತ್ತು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಹೇಳಿದ್ದರು ಎಂದು ತಿಳಿಸಿದ್ದಾರೆ.
ನನ್ನಂತೆ ಮೂವರು ಶಾಸಕರಿಗೆ ಕೂಡ ಆಪರೇಷನ್ ಕಮಲ ಮಾಡಲು ಯತ್ನಿಸಲಾಗಿದೆ. ಬಿಜೆಪಿಯ ಪ್ರಭಾವಿ ವ್ಯಕ್ತಿಯೊಬ್ಬರು ಆಪರೇಷನ್ ಕಮಲಕ್ಕೆ ಯತ್ನಿಸಿದ್ದಾರೆ ಎಂದು ಬಿ.ಆರ್. ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.