ಬೆಂಗಳೂರು : ಮುಸ್ಲಿಮರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್ ಐ ಆರ್ (FIR) ದಾಖಲಾಗಿದೆ.
ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಹಾಗೂ ದೇಶದಲ್ಲಿ ವಕ್ಫ್ ಮಂಡಳಿ ಇಲ್ಲದಂತೆ ಮಾಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸ್ವಾಮೀಜಿ ಹೇಳಿಕೆಗೆ ಮುಸ್ಲಿಂ ಸಮುದಾಯದಿಂದ ಭಾರಿ ಖಂಡನೆ ವ್ಯಕ್ತವಾಗಿತ್ತು.