ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಗುರುವಾರ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಯೋಧರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ಭಯೋತ್ಪಾದಕರು ಗುಂterrಡು ಹಾರಿಸಿದ್ದಾರೆ ಎಂದು ವರದಿಗಳು ತಿಳಿಸಿದೆ.
ಜಿಲ್ಲೆಯ ಥಾನಮಂಡಿ ಪ್ರದೇಶದಲ್ಲಿ ಈ ದಾಳಿ ನಡೆದಿದೆ. .ಹೆಚ್ಚುವರಿ ಪಡೆಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ಯಾವುದೇ ಸಾವುನೋವುಗಳ ಬಗ್ಗೆ ತಕ್ಷಣದ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಸಾಂದರ್ಭಿಕ ಚಿತ್ರ