ತುಮಕೂರು: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ತಹಶೀಲ್ದಾರ್ ಓರ್ವವರು ಮಾನವೀಯತೆ ಮೆರೆದ ಘಟನೆ ನಡೆದಿದೆ.
ತುಮಕೂರಿನ ಕೊರಟಗೆರೆ ಬಳಿ ಸಂಭವಿಸಿದ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗಳಾಗಿ ರಸ್ತೆಯಲ್ಲಿ ಒದ್ದಾಡುತ್ತಿದ್ದ ಗಾಯಾಳು ಸತ್ಯನಾರಾಯಣ ಎಂಬುವವರನ್ನು ಅದೇ ಮಾರ್ಗವಾಗಿ ತೆರಳುತ್ತಿದ್ದ ತಹಶೀಲ್ದಾರ್ ಮುನಿಶಾಮರೆಡ್ಡಿ ಆಸ್ಪತ್ರೆಗೆದಾಖಲಿಸಿ ಚಿಕಿತ್ಸೆ ನೀಡಿದ್ದಾರೆ.
ಕೊರಟಗೆರೆಯ ತಹಶೀಲ್ದಾರ್ ಆಗಿರುವ ಮುನಿಶಾಮರೆಡ್ಡಿ, ಗಾಯಾಳುವನ್ನು ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.