alex Certify BREAKING: ಅಮೆರಿಕಾದಲ್ಲಿ ಮತ್ತೆ ಶೂಟೌಟ್‌; ಇಬ್ಬರು ಬಲಿ, ಮೂವರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಮೆರಿಕಾದಲ್ಲಿ ಮತ್ತೆ ಶೂಟೌಟ್‌; ಇಬ್ಬರು ಬಲಿ, ಮೂವರಿಗೆ ಗಾಯ

ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ನಾರ್ತ್ ಕ್ಯಾಪಿಟಲ್ ಮತ್ತು ಓ ಸ್ಟ್ರೀಟ್‌ನಲ್ಲಿ ಮಧ್ಯಾಹ್ನ 12:50 ರ ಸುಮಾರಿಗೆ ಶೂಟೌಟ್‌ ನಡೆದಿದೆ.

ಗುಂಡೇಟಿನಿಂದ ಗಾಯಗೊಂಡಿದ್ದ ಇಬ್ಬರನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಮೂವರು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗಳಿಗೆ ತೆರಳಿದ್ದಾರೆ. ಗುಂಡಿನ ದಾಳಿಯಲ್ಲಿ ಮೃತಪಟ್ಟವರೆಲ್ಲ ವಯಸ್ಕರು ಎಂದು ಹೇಳಲಾಗಿದೆ.

ಇಬ್ಬರು ಶಂಕಿತರು ಸಣ್ಣ ಕಪ್ಪು ಬಣ್ಣದ SUV ಮೂಲಕ ಸ್ಥಳದಿಂದ ಪರಾರಿಯಾಗಿದ್ದಾರೆ. ಅಲ್ಲಿಂದ ಪರಾರಿಯಾಗುವ ಮುನ್ನ ಅಲ್ಲಿದ್ದ ಜನರ ಮೇಲೆಲ್ಲ ಬಂದೂಕುಗಳಿಂದ ಗುಂಡು ಹಾರಿಸಿದ್ದಾರೆ. ಶೂಟೌಟ್‌ ನಡೆದ ಸ್ಥಳದಲ್ಲಿ ಡ್ರಗ್ಸ್‌ ದಂಧೆ ನಡೆಯುತ್ತಿರುವ ಬಗ್ಗೆ ಅಮೆರಿಕದ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ತನಿಖೆ ಮುಂದುವರಿದಿದ್ದು, ಮಾದಕ ದ್ರವ್ಯಗಳನ್ನು ಮಾರಾಟ ಮಾಡುತ್ತಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...