ಬೆಂಗಳೂರು: ಆಗಸ್ಟ್ ತಿಂಗಳಿನಲ್ಲಿ ಮನೆ ಯಜಮಾನಿ ಅಕೌಂಟ್ ಗೆ 2 ಸಾವಿರ ರೂ. ಜಮಾ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ( Siddaramaiah)ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಮನೆ ‘ಯಜಮಾನಿ’ ಯಾರೆಂದು ಮನೆಯವರು ತೀರ್ಮಾನಿಸಬೇಕು, ನಾವು 2 ಸಾವಿರ ರೂ. ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅಕೌಂಟ್ ಮಾಹಿತಿ, ಆಧಾರ್ ಕಾರ್ಡ್, ಅರ್ಜಿ ಸಲ್ಲಿಸಬೇಕು. ಜೂನ್ 15 ರಿಂದ ಜುಲೈ 15ರ ಒಳಗಾಗಿ ಮನೆ ಒಡತಿಯ ಮಾಹಿತಿ ನೀಡಬೇಕು. ಆನ್ ( oneline) ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಮನೆಯ ಯಜಮಾನಿ ಖಾತೆಗೆ 2000 ರೂ ಹಾಕುತ್ತೇವೆ ಎಂದು ಹೇಳಿದರು.
ಮನೆಯ ಯಜಮಾನಿ ಯಾರು ಎನ್ನುವ ಬಗ್ಗೆ ಕುಟುಂಬಸ್ಥರೇ ಮಾಹಿತಿಯನ್ನು ನೀಡಬೇಕು. ಆ ಮಾಹಿತಿ ಆಧಾರದ ಮೇಲೆ ಪ್ರತಿ ತಿಂಗಳು 2000 ರೂ. ಖಾತೆಗೆ ಜಮಾ ಮಾಡಲಾಗುತ್ತದೆ . ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ದಾರರ ಮನೆಯ ಒಡತಿಯ ಖಾತೆಗೆ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.
200 ಯುನಿಟ್ ಉಚಿತ ವಿದ್ಯುತ್ ಕೊಡುತ್ತೇವೆ. ಈ ಗ್ಯಾರಂಟಿ ಯೋಜನೆ ಜಾರಿಗೆ ತೀರ್ಮಾನ ಮಾಡಿದ್ದೇವೆ. ಯಾರು ಎಷ್ಟು ವಿದ್ಯುತ್ ಬಳಸುತ್ತಾರೆ ಅಷ್ಟು ವಿದ್ಯುತ್ ಬಿಲ್ ಕಟ್ಟಬೇಕಾಗಿಲ್ಲ. 12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್ ಶುಲ್ಕ ನಿಗದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.