alex Certify BREAKING: ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ; ನೂತನ ಸಿಎಂ ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ; ನೂತನ ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಭರವಸೆಗಳನ್ನು ಇಂದೇ ಜಾರಿಗೆ ತರುವುದಾಗಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಮಾತನಾಡಿದ, ನೂತನ ಸಿಎಂ ಸಿದ್ದರಾಮಯ್ಯ, ಕರ್ನಾಟಕದ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾಡಿನ ಎಲ್ಲ ಜನರಿಗೂ ಧನ್ಯವಾದ ಹೇಳುತ್ತೇನೆ. ರಾಜ್ಯದ ಜನರ ನಿರೀಕ್ಷೆಯಂತೆ ನಾವು ಆಡಳಿತ ನಡೆಸುತ್ತೇವೆ ಎಂದರು.

ಕರ್ನಾಟಕದ ಜನತೆಗೆ ನಾವು ನೀಡಿದ್ದ ಭರವಸೆಗಳನ್ನು ಈಡೇರಿಸುತ್ತೇವೆ. ಇಂದೇ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ನುಡಿದಂತೆ ನಡೆಯುತ್ತೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...