ಈ ಬಾರಿ ನಡೆಯಲಿರುವ ವಿಧಾನಸಭಾ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಹತ್ವದ ಘೋಷಣೆ ಮಾಡಿದ್ದಾರೆ.
ಗೋಕಾಕ್ ನಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷದಿಂದ ಐದು ಬಾರಿ ಶಾಸಕನಾಗಿದ್ದೆ. ಆಗ ಗೆದ್ದು ನಾವು ನಾವೇ ಹೊಡೆದಾಡಬೇಕಿತ್ತು. ಈಗ ಬಿಜೆಪಿ ಜೊತೆ ವಿಲೀನನಾಗಿದ್ದೇನೆ ಎಂದು ಹೇಳಿದ್ದಾರೆ.
ಈ ಬಾರಿಯದ್ದು ನನ್ನ ಕೊನೆಯ ಚುನಾವಣೆಯಾಗಿರುವ ಕಾರಣ 50,000 ಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಬೇಕಿದೆ. ನಾನು ಒಂದೂವರೆ ವರ್ಷದಿಂದ ಸುಮ್ಮನೆ ಕುಳಿತಿದ್ದೆ. ಇದೀಗ ಸರಿಯಾದ ಸಮಯಕ್ಕೆ ಯುದ್ಧ ಪ್ರಾರಂಭ ಮಾಡಿದ್ದೇವೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.