ಉಕ್ರೇನ್ನಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ನ ಬಿಕ್ಕಟ್ಟಿನ ಕುರಿತು ಮತ್ತೊಮ್ಮೆ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಇದು ಭಾನುವಾರದಿಂದ ಪ್ರಧಾನಿ ಮೋದಿ ಕರೆದ ನಾಲ್ಕನೇ ಉನ್ನತ ಮಟ್ಟದ ಸಭೆ ಇದಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಷ್ಯಾದ ಪಡೆಗಳು ಉಕ್ರೇನ್ನಲ್ಲಿ ದಾಳಿಯನ್ನು ತೀವ್ರಗೊಳಿಸಿದ್ದು ಖಾರ್ಕಿವ್ನಲ್ಲಿ ನಡೆದ ಶೆಲ್ ದಾಳಿಯಲ್ಲಿ ಓರ್ವ ಕನ್ನಡಿಗ ವಿದ್ಯಾರ್ಥಿಯು ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಈ ವಿಚಾರವು ಧೃಡಪಟ್ಟ ಬೆನ್ನಲ್ಲೇ ಪ್ರಧಾನಿ ಮೋದಿ ಈ ಸಭೆಯನ್ನು ಕರೆದಿದ್ದಾರೆ ಎನ್ನಲಾಗಿದೆ.
ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಯನ್ನು ಖಚಿತಪಡಿಸುವುದು ತಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.