ಸರ್ಕಾರದ ನಿಯಂತ್ರಣದಲ್ಲಿರುವ ಉಕ್ರೇನ್‌ನ ಎಲ್ಲಾ ಭಾಗಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗುವುದು ಎಂದು ದೇಶದ ರಾಷ್ಟ್ರೀಯ ಭದ್ರತೆ ಮತ್ತು ರಕ್ಷಣಾ ಮಂಡಳಿ ಬುಧವಾರ ಅಧಿಕೃತ ಮಾಹಿತಿಯನ್ನು ಪ್ರಕಟಿಸಿದೆ.
ಈ ನಿರ್ಧಾರವನ್ನು ಉಕ್ರೇನಿಯನ್ ಸಂಸತ್ತು 48 ಗಂಟೆಗಳ ಒಳಗೆ ಅನುಮೋದಿಸುತ್ತದೆ ಮತ್ತು 30 ದಿನಗಳವರೆಗೆ ಇರುತ್ತದೆ, ಹೆಚ್ಚುವರಿ 30 ದಿನಗಳವರೆಗೆ ತುರ್ತು ಪರಿಸ್ಥಿತಿಯನ್ನು ವಿಸ್ತರಿಸುವ ಸಾಧ್ಯತೆಯಿದೆ.
ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್ ಹೊರತುಪಡಿಸಿ ನಮ್ಮ ದೇಶದ ಭೂಪ್ರದೇಶದಾದ್ಯಂತ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗುವುದು ಎಂದು ಉಕ್ರೇನ್‌ನ ರಾಷ್ಟ್ರೀಯ ಭದ್ರತೆ ಮತ್ತು ರಕ್ಷಣಾ ಮಂಡಳಿಯ ಕಾರ್ಯದರ್ಶಿ ಒಲೆಕ್ಸಿ ಡ್ಯಾನಿಲೋವ್ ಮಾಹಿತಿ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡ್ಯಾನಿಲೋವ್, ತುರ್ತು ಪರಿಸ್ಥಿತಿಯು ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವುದು ಹಾಗೂ ಕೆಲವು ಸಾರಿಗೆಗಳ ಮೇಲಿನ ತಪಾಸಣೆಗಳನ್ನು ಬಿಗಿಗೊಳಿಸಲಾಗುತ್ತದೆ ಎಂದು ಹೇಳಿದರು.