alex Certify BREAKING: ಉತ್ತರಾಖಂಡದಲ್ಲಿ ಮೇಘ ಸ್ಫೋಟ: ಹಲವೆಡೆ ಭೂಕುಸಿತ, ಐವರ ಸಾವು; ಚರಂಡಿಯಲ್ಲಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಉತ್ತರಾಖಂಡದಲ್ಲಿ ಮೇಘ ಸ್ಫೋಟ: ಹಲವೆಡೆ ಭೂಕುಸಿತ, ಐವರ ಸಾವು; ಚರಂಡಿಯಲ್ಲಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆ

ಡೆಹ್ರಾಡೂನ್; ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವೆಡೆಗಳಲ್ಲಿ ಭೂಕುಸಿತವುಂಟಾಗಿದ್ದು, ಮಳೆ ಅವಘಡದಲ್ಲಿ ಐದಕ್ಕೂ ಹೆಚ್ಚು ನಜರು ಸಾವನ್ನಪ್ಪಿದ್ದಾರೆ.

ಉತ್ತರಾಖಂಡ ಮೇಘಸ್ಫೋಟದಿಂದ ತತ್ತರಿಸಿದ್ದು, ಬದರಿನಾಥ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತಕ್ಕೆ ಯಾತ್ರಿಗಳ ವಾಹನ ಲಂಬಗಡ ಚರಂಡಿಯಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಸದ್ಯ ಚರಂಡಿಯಲ್ಲಿ ಸಿಲುಕಿದ್ದ ವಾಹನದಿಂದ ಪ್ರಯಾಣಿಕರನ್ನು ರಕ್ಷಿಸಲಾಗಿದೆ.

ಪೆಟ್ರೋಲ್ ಬೆಲೆ ಏರಿಕೆಯಿಂದ ಕಂಗಾಲಾದ ಜನತೆಗೆ ಗುಡ್ ನ್ಯೂಸ್: ಇಂಧನ ತೆರಿಗೆ ಇಳಿಕೆಗೆ ಸರ್ಕಾರದ ಚಿಂತನೆ

ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಯಿಂದ ವಾಹನವನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರೆದಿದೆ. ಈ ನಡುವೆ ಭೂ ಕುಸಿತದಿದಾಗಿ ರಿಷಿಕೇಶ-ಬದರಿನಾಥ ಹೆದ್ದಾರಿ ಬಂದ್ ಆಗಿದ್ದು, ಸಿರೋಬಗಡದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.

ಇನ್ನು ಖಂಖ್ರಾ-ಖೇಡಾಖಾಲ್-ಖಿರ್ಸು ಸಂಪರ್ಕ ರಸ್ತೆ ಕೂಡ ಭೂಕುಸಿತದಿಂದ ಹಾನಿಯಾಗಿದ್ದು, ಈ ರಸ್ತೆ ಮಾರ್ಗ ಕೂಡ ಬಂದ್ ಆಗಿದೆ. ಮತ್ತೊಂದೆಡೆ ನೈನಿತಾಲ್ ಹಾಗೂ ಉಧಮ್ ಪುರ ನಗರವನ್ನು ಸಂಪರ್ಕಿಸುವ ಹಲದವನಿ ಸೇತುವೆ ಭಾರಿ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದು, ಉಬಯ ನಗರಗಳ ಸಂಪರ್ಕ ಕಡಿತಗೊಂಡಿದೆ. ಭಾರಿ ಮಳೆ, ಪ್ರವಾಹ ಹಿನ್ನೆಲೆಯಲ್ಲಿ ಇನ್ನೊದೆಡೆ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...