ಉತ್ತರ ಪ್ರದೇಶದ ಈಶಾನ್ಯ ಭಾಗದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಳಗಿನ ಜಾವ 1.12 ನಿಮಿಷಕ್ಕೆ ಈಶಾನ್ಯ ಲಕ್ನೋದಿಂದ 139 ಕಿಲೋಮೀಟರ್ ದೂರದಲ್ಲಿ 82 ಅಡಿ ಆಳದಲ್ಲಿ ಈ ಕಂಪನ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬಹುತೇಕ ಜನರು ಭೂಕಂಪನ ಸಂಭವಿಸಿದ ಸಂದರ್ಭದಲ್ಲಿ ಗಾಢ ನಿದ್ರೆಯಲ್ಲಿದ್ದ ಕಾರಣ ಅದರ ಅನುಭವವಾಗಿಲ್ಲ.
ಭೂಕಂಪದಿಂದ ಯಾವುದೇ ಹಾನಿ ಸಂಭವಿಸಿರುವ ಕುರಿತು ವರದಿಗಳಾಗಿಲ್ಲ.