ಒಡಿಶಾದ ರೈಲು ದುರಂತದಲ್ಲಿ (railway accident) 207 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಇದಿಗ ರೈಲು ದುರಂತದ ಸ್ಥಳಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ.
ವಾಯುಸೇನಾ ಹೆಲಿಕಾಪ್ಟರ್ ಮೂಲಕ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿರುವ ಬಹನಾಗ ರೈಲ್ವೆ ನಿಲ್ದಾಣಕ್ಕೆ (railway station) ಪ್ರಧಾನಿ ಮೋದಿ ಆಗಮಿಸಿ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ನಂತರ ಕಟಕ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಒಡಿಶಾದ ಬಾಲಸೋರ್ ಪ್ರದೇಶದಲ್ಲಿ ನಿನ್ನೆ ಭೀಕರ ರೈಲು ಅಪಘಾತ (railway accident) ನಡೆದಿದ್ದು, ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಹಾಗೂ ಗಾಯಾಳುಗಳಿಗೆ ಕೇಂದ್ರ ರೈಲ್ವೆ ಇಲಾಖೆ (Central Railway Department) ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದೆ.