alex Certify BREAKING: ಕನ್ನಡಿಗ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕನ್ನಡಿಗ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಆರೋಪಿಗಳು ಅರೆಸ್ಟ್

ಬೆಳಗಾವಿ: ಕನ್ನಡಿಗ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬೆಳಗಾವಿಯ ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ.

ಎರಡು ದಿನಗಳ ಹಿಂದೆ ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ನಡೆದಿದ್ದ ಕಾರ್ಯಕ್ರಮದ ವೇಳೆ ವೇದಿಕೆ ಮೇಲೆ ಡಾನ್ಸ್ ಮಾಡುತ್ತಿದ್ದಾಗ ಕನ್ನಡ ಬಾವುಟ ಹಿಡಿದು ನೃತ್ಯ ಮಾಡಿದ ವಿದ್ಯಾರ್ಥಿ ಮೇಲೆ ಆತನ ಸಹಪಾಠಿಗಳೇ ಆದ ಮರಾಠಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದರು.

ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಬೆಳಗಾವಿಯಾದ್ಯಂತ ಉದ್ವಿಗ್ನ ಪರಿಸ್ಥಿತಿಯುಂಟಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬೆಳಗಾವಿ ಪೊಲೀಸರು, ಹಲ್ಲೆ ನಡೆಸಿದ್ದ ಆರೋಪಿ ಸುಮೀತ್ ಕಾಳ್ವೆ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ನಾಲ್ವರಲ್ಲಿ ಮೂವರು ಅಪ್ರಾಪ್ತರಾಗಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...