ಮಂಗಳವಾರದಂದು ತನ್ನ ಅಂಗಡಿಯಲ್ಲಿಯೇ ಮುಸ್ಲಿಂ ಮೂಲಭೂತವಾದಿಗಳಿಂದ ಕನ್ನಯ್ಯ ಲಾಲ್ ಎಂಬ ಟೈಲರ್ ಹತ್ಯೆಯಾಗಿದ್ದು, ಇದನ್ನು ಖಂಡಿಸಿ ದೇಶದಾದ್ಯಂತ ಇಂದು ಪ್ರತಿಭಟನೆ ನಡೆಯುತ್ತಿದೆ. ತಮ್ಮ ಆರೋಪವನ್ನು ವಿಡಿಯೋ ಮೂಲಕ ಬಹಿರಂಗವಾಗಿಯೇ ಒಪ್ಪಿಕೊಂಡಿರುವ ಕಾರಣ ಅವರಿಗೆ ಕೂಡಲೇ ಗಲ್ಲು ಶಿಕ್ಷೆ ವಿಧಿಸಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.
ಘಟನೆ ನಡೆದ ಉದಯ್ಪುರದಲ್ಲೂ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಸೇರಿರುವ ಪ್ರತಿಭಟನಾಕಾರರು ಕೃತ್ಯವನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತಿದ್ದಾರೆ. ಉದಯ್ಪುರ್ ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಇದನ್ನು ಲೆಕ್ಕಿಸದೆ ಕನ್ನಯ್ಯ ಲಾಲ್ ಗೆ ನ್ಯಾಯ ಕೊಡಿಸಬೇಕೆಂದು ಪ್ರತಿಭಟನೆ ನಡೆಸಲಾಗುತ್ತಿದೆ.
ಕರ್ನಾಟಕವೂ ಸೇರಿದಂತೆ ದೇಶದ ಇತರೆ ಭಾಗಗಳಲ್ಲೂ ಸಹ ಕನ್ನಯ್ಯ ಲಾಲ್ ಹತ್ಯೆಯನ್ನು ಖಂಡಿಸಿ ಪ್ರತಿಭಟನೆಗಳು ನಡೆಯುತ್ತಿದ್ದು, ಹಂತಕರಿಗೆ ಗಲ್ಲು ಶಿಕ್ಷೆಯೇ ಸೂಕ್ತ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ. ಇದರ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್ ಗಳ ಕುರಿತಂತೆ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದಾರೆ.