
ಮಿನಿ ಬಸ್ ಒಂದು ಕಮರಿಗೆ ಉರುಳಿದ ಪರಿಣಾಮ 8 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.
ಈ ಬಸ್ ತತ್ರಿಯಿಂದ ದೋಡಾಕ್ಕೆ ತೆರಳುತ್ತಿತ್ತೆಂದು ಹೇಳಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.