ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಹುನಿರೀಕ್ಷಿತ ಬಜೆಟ್ ಮಂಡನೆ ಮಾಡಲಿದ್ದು, ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಹಜವಾಗಿ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ.
ಬಜೆಟ್ ಗೂ ಮೊದಲು ಸಿಎಂ ಬಸವರಾಜ್ ಬೊಮ್ಮಾಯಿ ಟೆಂಪಲ್ ರನ್ ಆರಂಭಿಸಿದ್ದು, ವಿವಿಧ ದೇವಾಲಯಗಳಿಗೆ ಭೇಟಿ ನಿಡಿ ದೇವರ ದರ್ಶನ ಪಡೆದಿದ್ದಾರೆ.
ಬೆಂಗಳೂರಿನ ಆರ್.ಟಿ. ನಗರದ ತಮ್ಮ ಮನೆಯ ಬಳಿಯಿರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಶ್ರೀಕಂಠೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬಾಲಬ್ರೂಯಿ ಅತಿಥಿ ಗೃಹದ ಬಳಿಯಿರುವ ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಸಿಎಂ ಬೊಮ್ಮಾಯಿ ಅವರಿಗೆ ಸಚಿವ ಭೈರತಿ ಬಸವರಾಜ್, ಶ್ರೀನಿವಾಸ್ ಪೂಜಾರಿ ಸಾಥ್ ನೀಡಿದರು.
ಚುನಾವಣೆ ಹೊತ್ತಿನಲ್ಲಿ ಸಿಎಂ ಬೊಮ್ಮಾಯಿ ಮಂಡಿಸುತ್ತಿರುವ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿದ್ದು, ನಾಡಿನ ಜನತೆಗೆ ಬಂಪರ್ ಕೊಡುಗೆಗಳು ಸಿಗಲಿದೆಯೇ ಕಾದುನೋಡಬೇಕಿದೆ.