ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಮೇ 24ಕಕ್ಕೆ 15ನೇ ವಿಧಾನಸಭೆ ಅವಧಿ ಮುಕ್ತಾಯವಾಗಲಿದೆ ಎಂದು ತಿಳಿಸಿದ್ದಾರೆ. ಕರ್ನಾಟಕದಲ್ಲಿ 5 ಕೋಟಿ 21 ಲಕ್ಷ ಮತದಾರರಿದ್ದಾರೆ. ಪುರುಷ ಮತದಾರರು-2,63,43,561, ಮಹಿಳೆಯರು 2,59,26,319 ಮತದಾರರಿದ್ದಾರೆ. ತೃತೀಯಲಿಂಗಿಗಳು 4,699 ಮತದಾರರು ಇದ್ದಾರೆ. 12.15 ಲಕ್ಷ ಯುವ ಮತದಾರರಿದ್ದಾರೆ.
5.55 ಲಕ್ಷ ವಿಕಲಚೇತನ ಮತದಾರರಿದ್ದು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗುವುದು. ಕರ್ನಾಟಕದಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀಡಲಾಗಿದೆ ಎಂದರು.
ಜೇನುಕುರುಬ, ಕಾಡುಕುರುಬ ಮತದಾರರಿಗೆ ಪ್ರತ್ಯೇಕ ಬೂತ್ ವ್ಯವಸ್ಥೆ ಮಾಡಲಾಗುವುದು. ರಾಜ್ಯದಲ್ಲಿ 58,282 ಮತಗಟ್ಟೆಗಳ ಸ್ಥಾಪನೆಯಾಗಲಿದೆ. ಗ್ರಾಮಾಂತರ ಪ್ರದೇಶದಲ್ಲಿ 34,219 ಮತಗಟ್ಟೆ, ಮಹಿಳಾ ಸಿಬ್ಬಂದಿ ನಿರ್ವಹಿಸುವ ಮತಗಟ್ಟೆ ಸಂಖ್ಯೆ 1,320. ಹಾಗೂ 224 ಕ್ಷೇತ್ರಗಳಲ್ಲಿ ತಲಾ ಒಂದು ಯುವ ಮತಗಟ್ಟೆ ಸ್ಥಾಪನೆ ಮಾಡಲಾಗುವುದು.
ಅಭ್ಯರ್ಥಿಗಳ ಮಾಹಿತಿ ವೆಬ್ ಸೈಟ್ ನಲ್ಲಿ ಲಭ್ಯ. ಮತದಾರರಲ್ಲಿ ಜಾಗೃತಿ ಮೂಡಿಸಲು ಆಯೋಗದಿಂದ ಕ್ರಮ ಕೈಗೊಳ್ಳಲಾಗುವುದು. ಚುನಾವಣೆಗಾಗಿ 2400 ವೀಕ್ಷಕರ ನೇಮಕ ಮಾಡಲಾಗುವುದು.