ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ.
ಹನೂರು ತಾಲೂಕಿನ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿ ನಡೆಸಿದ್ದು, ಆನೆ ದಾಳಿಗೆ ಪ್ರಭುಲಿಂಗಸ್ವಾಮಿ ಎಂಬುವವರು ಸಾವನ್ನಪ್ಪಿದ್ದಾರೆ.
ಪೊರಕೆ ಕಡ್ಡಿ ಸಂಗ್ರಹಕ್ಕೆ ಮಗ ಚಂದ್ರು ಜೊತೆ ಪ್ರಭುಲಿಂಗಸ್ವಾಮಿ ತೆರಳಿದ್ದರು. ಈ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಪ್ರಭುಲಿಂಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.