
ಬೆಂಗಳೂರು: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೊಸಕೆರೆ ಹಳ್ಳಿಯಲ್ಲಿ ನಡೆದಿದೆ.
PES ಕಾಲೇಜು ವಿದ್ಯಾರ್ಥಿ ಆದಿತ್ಯ ಪ್ರಭು ಆತ್ಮಹತ್ಯೆಗೆ ಶರಣಾದವ. ಪಿಇಎಸ್ ಕಾಲೇಜಿನ 14ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಗಿರಿನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.