alex Certify BREAKING: ಕೇಂದ್ರ ಬಜೆಟ್-2023; ರಾಷ್ಟ್ರಪತಿ ಭೇಟಿಯಾಗಿ ಅಂಕಿತ ಪಡೆದ ವಿತ್ತ ಸಚಿವೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೇಂದ್ರ ಬಜೆಟ್-2023; ರಾಷ್ಟ್ರಪತಿ ಭೇಟಿಯಾಗಿ ಅಂಕಿತ ಪಡೆದ ವಿತ್ತ ಸಚಿವೆ

ನವದೆಹಲಿ: ಇಂದು ಲೋಕಸಭೆಯಲ್ಲಿ ಬಿಜೆಪಿ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಬಜೆಟ್ ಮಂಡನೆಗೆ ಸಮ್ಮತಿ ಪಡೆದರು.

ಬೆಳಿಗ್ಗೆ 11 ಗಂಟೆಗೆ 5ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಜೆಟ್ ಮಂಡನೆಗೆ ಪೂರ್ವಭಾವಿಯಾಗಿ ನಡೆಯುವ ಕೇಂದ್ರ ಸಚಿವ ಸಂಪುಟ ಸಭೆಗೂ ಮುನ್ನ ಶಿಷ್ಟಾಚಾರದಂತೆ ರಾಷ್ಟ್ರಪತಿ ಭವನಕ್ಕೆ ತೆರಳಿ, ರಾಷ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು.

ಬಳಿಕ ಬಜೆಟ್ ಮಂಡನೆಗೆ ರಾಷ್ಟ್ರಪತಿಗಳಿಂದ ಅಂಕಿತ ಪಡೆದುಕೊಂಡರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...