ಬೆಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶವಾಗಿದೆ. ಕೇರಳ ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 4ಕ್ಕೆ ಕೇರಳ ಪ್ರವೇಶಿಸಬೇಕಿದ್ದ ಮುಂಗಾರು ಈ ಬಾರಿ ವಿಳಂಬವಾಗಿದ್ದು, ಇಂದು ಕೇರಳ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದೆ ಎಂದು ಮುಂಗಾರು ಮಳೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಕರ್ನಾಟಕ್ಕೂ ಪ್ರವೇಶಿಸಲಿದೆ. ಬಿಪರ್ ಜೋಯ್ ಚಂಡಮಾರುತ ಹಿನ್ನೆಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೊಂಚ ವಿಳಂಬವಾಗಿದೆ ಎಂದು ಹೇಳಲಾಗುತ್ತಿದೆ.