
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ್ದ ಸ್ಯಾಂಟ್ರೋ ರವಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ, ಕಳೆದ 11 ದಿನಗಳಿಂದ ತಪ್ಪಿಸಿಕೊಂಡು ಓಡಾಟ ನಡೆಸಿದ್ದ. ಸ್ಯಾಂಟ್ರೋ ರವಿ ಬಂಧನಕ್ಕಾಗಿ ನಾಲ್ವರು ಎಸ್ ಪಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.
ಇದೀಗ ಕರ್ನಾಟಕ ಪೊಲೀಸರು ಆರೋಪಿ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.