
ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದ್ದು ಪ್ರಸ್ತುತ ಅವರನ್ನು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇನ್ನು ಈ ವಿಚಾರವಾಗಿ ಮಾತನಾಡಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಸೋದರ ಸೊಸೆ ರಚನಾ, ಕೊರೊನಾ ಪರೀಕ್ಷಾ ವರದಿ ಬರುತ್ತಿದ್ದಂತೆಯೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ತುರ್ತು ನಿಗಾ ಘಟಕದಲ್ಲಿ ಲತಾ ಮಂಗೇಶ್ಕರ್ರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.