alex Certify BREAKING: ಕೊರೊನಾ ಸೋಂಕಿಗೊಳಗಾದ ಗಾನ ಕೋಗಿಲೆ – ಲತಾ ಮಂಗೇಶ್ಕರ್‌ ಗೆ ಐಸಿಯುನಲ್ಲಿ ಚಿಕಿತ್ಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೊರೊನಾ ಸೋಂಕಿಗೊಳಗಾದ ಗಾನ ಕೋಗಿಲೆ – ಲತಾ ಮಂಗೇಶ್ಕರ್‌ ಗೆ ಐಸಿಯುನಲ್ಲಿ ಚಿಕಿತ್ಸೆ

ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್​ಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದ್ದು ಪ್ರಸ್ತುತ ಅವರನ್ನು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇನ್ನು ಈ ವಿಚಾರವಾಗಿ ಮಾತನಾಡಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್​ ಅವರ ಸೋದರ ಸೊಸೆ ರಚನಾ, ಕೊರೊನಾ ಪರೀಕ್ಷಾ ವರದಿ ಬರುತ್ತಿದ್ದಂತೆಯೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ತುರ್ತು ನಿಗಾ ಘಟಕದಲ್ಲಿ ಲತಾ ಮಂಗೇಶ್ಕರ್​ರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

— ANI (@ANI) January 11, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...