
ಅಹಮದಾಬಾದಿನ ರನಿಪ್ ನ ನಿಶಾನ್ ಪಬ್ಲಿಕ್ ಶಾಲೆಯ ಮತಗಟ್ಟೆಯಲ್ಲಿ ನರೇಂದ್ರ ಮೋದಿಯವರು ಮತ ಚಲಾಯಿಸಿದ್ದು, ಎಲ್ಲರೂ ಮತ ಚಲಾಯಿಸುವಂತೆ ಕರೆ ನೀಡಿದ್ದಾರೆ.
ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ರಂದು ಮೊದಲ ಹಂತದ ಮತದಾನ ನಡೆದಿದ್ದು, ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಡಿಸೆಂಬರ್ 8ರಂದು ಫಲಿತಾಂಶ ಹೊರಬೀಳಲಿದೆ.