
ಐದು ದಶಕಗಳ ಕಾಲ ಸುಧೀರ್ಘ ನಂಟನ್ನು ಹೊಂದಿದ್ದ ಕಾಂಗ್ರೆಸ್ ಪಕ್ಷವನ್ನು ಕಳೆದ ತಿಂಗಳು ತೊರೆದಿದ್ದ ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಇಂದು ತಮ್ಮ ಹೊಸ ಪಕ್ಷವನ್ನು ಘೋಷಿಸುವ ಸಾಧ್ಯತೆ ಇದೆ. ಈ ಕುರಿತಂತೆ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಸುಳಿವು ನೀಡಿದ್ದಾರೆ.
ಕಾಂಗ್ರೆಸ್ ತೊರೆಯುವ ಮುನ್ನ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ಜಮ್ಮು ಕಾಶ್ಮೀರದ ಜನತೆಗಾಗಿ ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದರು. ಅಲ್ಲದೆ ಈ ಅವಧಿಯಲ್ಲಿ ಕಣಿವೆ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದ ಅವರು ಹಲವು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದರು.
ಹೀಗಾಗಿ ಗುಲಾಂ ನಬಿ ಆಜಾದ್ ಅವರ ಹೊಸ ಪಕ್ಷಕ್ಕೆ ಜಮ್ಮು ಕಾಶ್ಮೀರದ ಬಹುತೇಕ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಬರಬಹುದು ಎಂದು ಹೇಳಲಾಗುತ್ತಿದೆ. ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಗುಲಾಂ ನಬಿ ಆಜಾದ್, ಜಮ್ಮು ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ಭರವಸೆ ನೀಡಿದ್ದಾರೆ.