ಚಿಕ್ಕಮಗಳೂರು: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳೆಯರಿಗೆ 2000 ರೂಪಾಯಿ ಮಾಸಿಕ ಸಹಾಯಧನ ಯೋಜನೆ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಕೊಂಚ ವಿಳಂಬವಾಗುತ್ತಿದೆ. ಯೋಜನೆಯಲ್ಲಿ ಕೆಲವೊಂದು ಬದಲಾವಣೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಿರುವುದರಿಂದ ಹಾಗೂ ಗೃಹಲಕ್ಷ್ಮಿ ಯೋಜನೆಗಾಗಿಯೇ ಪ್ರತ್ಯೇಕ ಆಪ್ ಸಿದ್ಧಪಡಿಸಲು ಹೇಳಿದ್ದೇವೆ. ಹಾಗಾಗಿ ಅರ್ಜಿ ಸಲ್ಲಿಕೆಗೆ ಸ್ವಲ್ಪ ವಿಳಂಬವಾಗುತ್ತಿದೆ ಎಂದರು.
ಯೋಜನೆ ಜನರಿಗೆ ಸರಳವಾಗಿ ಸಿಗಬೇಕು ಎಂಬುದು ಸರ್ಕಾರದ ಉದ್ದೇಶ. ಆಗಸ್ಟ್ 17 ಅಥವಾ 18ಕ್ಕೆ ಫಲಾನುಭವಿಗಳ ಖಾತೆಗೆ ಖಂಡಿತವಾಗಿ ಯೋಜನೆಯ ಹಣವನ್ನು ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದರು.