alex Certify BREAKING: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ; ಮರು ತನಿಖೆಗೆ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ; ಮರು ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ್ದ ಆಕ್ಸಿಜನ್ ದುರಂತ ಪ್ರಕರಣವನ್ನು ರಾಜ್ಯ ಸರ್ಕಾರ ಮರು ತನಿಖೆಗೆ ಆದೇಶ ನೀಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ನಡೆದಿದ್ದ ಆಕ್ಸಿಜನ್ ದುರಂತ ಪ್ರಕರಣವನ್ನು ರಾಜ್ಯ ಸರ್ಕಾರ ಮರು ತನಿಖೆ ಮಾಡುತ್ತಿದೆ. ಈ ಹಿಂದೆ ಬಿಜೆಪಿ ಸರ್ಕಾರ ಮರು ತನಿಖೆಗೆ ಆದೇಶ ನೀಡಿತ್ತು. ಆದರೆ ಪ್ರಕರಣದ ಮರು ತನಿಖೆಯಾಗಿದೆಯೇ? ತನಿಖಾ ವರದಿ ಏನಾಗಿದೆ? ಯಾವುದರ ಬಗ್ಗೆಯೂ ಮಾಹಿತಿ ಇಲ್ಲ. ಹಾಗಾಗಿ ನಮ್ಮ ಸರ್ಕಾರ ಮತ್ತೊಮ್ಮೆ ಮರುತನಿಖೆಗೆ ಆದೇಶ ನೀಡಿದೆ ಎಂದರು.

ಕೋವಿಡ್ ಸಂದರ್ಭದಲ್ಲಿ 2021ರ ಮೇ 2ರಂದು ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ 36 ರೋಗಿಗಳು ಆಕ್ಸಿಜನ್ ಪೂರೈಕೆಯಾಗದೇ ಸಾವನ್ನಪ್ಪಿದ್ದರು. ಈ ದುರಂತ ರಾಷ್ಟ್ರ ಮಟ್ಟದಲ್ಲಿ ತೀವ್ರ ಸುದ್ದಿಯಾಗಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...