alex Certify BREAKING: ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಭಾರೀ ಸ್ಫೋಟ; ಮಹಿಳೆ ಸೇರಿದಂತೆ 7 ಮಂದಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಭಾರೀ ಸ್ಫೋಟ; ಮಹಿಳೆ ಸೇರಿದಂತೆ 7 ಮಂದಿಗೆ ಗಂಭೀರ ಗಾಯ

ಜಮ್ಮು – ಕಾಶ್ಮೀರದ ಬಂಡಿಪೋರಾದಲ್ಲಿ ಭಾರೀ ಸ್ಪೋಟ ಸಂಭವಿಸಿದೆ. ಸುಂಬಲ್​ ಇಲಾಖೆಯ ಟ್ಯಾಕ್ಸಿ ಸ್ಟ್ಯಾಂಡ್​ನಲ್ಲಿ ಈ ಸ್ಪೋಟ ಸಂಭವಿಸಿದೆ ಎನ್ನಲಾಗಿದೆ.

ಈ ಸ್ಫೋಟದಲ್ಲಿ ಮಹಿಳೆ ಸೇರಿದಂತೆ 7 ಮಂದಿ ಗಾಯಗೊಂಡಿದ್ದಾರೆ. ಕಾರಿನ ಗಾಜುಗಳು ಪುಡಿಪುಡಿಯಾಗಿವೆ. ಗಾಯಾಳುಗಳಲ್ಲಿ ಇಬ್ಬರನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೂ ಉಳಿದ ನಾಲ್ವರು ಬಂಡಿಪೋರಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಗೂಢ ಸ್ಪೋಟ ಹೇಗೆ ಸಂಭವಿಸಿದೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದೊಂದು ಗ್ರೇನೆಡ್​ ಸ್ಫೋಟ ಇರಬಹುದು ಎಂದು ಅಂದಾಜಿಸಲಾಗಿದೆ. ಆದರೆ ಈ ಬಗ್ಗೆ ಪೊಲೀಸರು ಯಾವುದೇ ಸ್ಪಷ್ಟನೆ ನೀಡಿಲ್ಲ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...