ಇಂದು ಅಡಿಲೇಡ್ ನಲ್ಲಿ ನಡೆದ ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ನಡೆದ ಸೆಮಿಫೈನಲ್ ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ಮುಖಾಮುಖಿಯಾಗಿದ್ದು, ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.
ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದಲ್ಲಿ ಕೆ.ಎಲ್. ರಾಹುಲ್ 5 ರನ್ ಗೆ ಔಟಾದರೇ ರೋಹಿತ್ ಶರ್ಮಾ 27ರನ್ ಗಳಿಸಿ ಕ್ರಿಸ್ ಜೋರ್ಡಾನ್ ಗೆ ತಮ್ಮ ವಿಕೆಟ್ ಒಪ್ಪಿಸಿದರು.
ವಿರಾಟ್ ಕೊಹ್ಲಿ (50)ಹಾಗೂ ಹಾರ್ದಿಕ್ ಪಾಂಡ್ಯ 33 ಎಸೆತಗಳಲ್ಲಿ 63 ರನ್ ಗಳಿಸುವ ಮೂಲಕ ಟೀಮ್ ಇಂಡಿಯಾಗೆ ಬೆನ್ನೆಲುಬಾದರು. ಒಟ್ಟಾರೆ ಭಾರತ ತಂಡ 168 ರನ್ ಗಳ ಮೊತ್ತ ದಾಖಲಿಸಿತು.
ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಗಳಾದ ಜೋಸ್ ಬಟ್ಲರ್ ತಮ್ಮ ವಿಕೆಟ್ ಕಳೆದುಕೊಳ್ಳದೇ ಭರ್ಜರಿ ಪಾರ್ಟ್ನರ್ ಶಿಪ್ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಜೋಸ್ ಬಟ್ಲರ್ 49 ಎಸೆತಗಳಲ್ಲಿ 80, ಅಲೆಕ್ಸ್ ಹೇಲ್ಸ್ 47 ಎಸೆತಗಳಲ್ಲಿ 86 ರನ್ ಗಳಿಸುವ ಮೂಲಕ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು, ಟೀಮ್ ಇಂಡಿಯಾ ಬೌಲರ್ ಗಳ ಬೆವರಿಳಿಸಿದ್ದಾರೆ. ಒಟ್ಟಾರೆ ಇಂಗ್ಲೆಂಡ್ ತಂಡಕ್ಕೆ ಹತ್ತು ವಿಕೆಟ್ ಗಳ ಭರ್ಜರಿ ಜಯ ಸಿಕ್ಕಿದೆ.
ಮೆಲ್ಬೋರ್ನ್ ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿವೆ.