ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕನಕಪುರ ವಿಧಾನಸಭಾ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದೆ.
ರಾಮನಗರ ಜಿಲ್ಲೆ ಕನಕಪುರ ವಿಧಾನಸಭಾ ಕ್ಷೇತ್ರದಿಂದ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಡಿ.ಕೆ.ಶಿವಕುಮಾರ್ ನಾಮಪತ್ರ ತಿರಸ್ಕೃತವಾಗುವ ಭೀತಿ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ಕೊನೇ ದಿನವಾದ ನಿನ್ನೆ ಸಂಸದ ಡಿ.ಕೆ. ಸುರೇಶ್ ಕೂಡ ಕನಕಪುರದಲ್ಲಿ ನಾಮಪತ್ರ ಸಲ್ಲಿಸಿದ್ದರು.
ಇದೀಗ ಡಿ.ಕೆ.ಶಿವಕುಮಾರ್ ನಾಮಪತ್ರ ಅಂಗೀಕಾರವಾಗಿದ್ದು, ಡಿಕೆಶಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಈಗ ಅಭ್ಯರ್ಥಿಯಾಗಿ ಯಾರು ಮುಂದುವರಿಯುತ್ತಾರೆ ಎಂಬುದು ಕುತೂಹಲ.