
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಡಿಕೆಶಿ ಅರ್ಜಿಯನ್ನು ವಜಾಗೊಳಿಸಿದೆ.
ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ.