alex Certify BREAKING: ಡಿ.ಕೆ. ಶಿವಕುಮಾರ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಡಿ.ಕೆ. ಶಿವಕುಮಾರ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ನ್ನು ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.

ಡಿ.ಕೆ. ಶಿವಕುಮಾರ್, ಬೆಂಗಳೂರಿನ ಹೆಚ್ ಎ ಎಲ್ ನಿಂದ ಮುಳಬಾಗಿಲು ಕ್ಷೇತ್ರಕ್ಕೆ ಚುನಾವಣಾ ಪ್ರಚಾರಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಹೆಲಿಕಾಪ್ಟರ್ ಹಾರಾಟದ ವೇಳೆ ರಣಹದ್ದು ಬಡಿದ ಪರಿಣಾಮವಾಗಿ ಹೆಲಿಕಾಪ್ಟರ್ ನ ಮುಂದಿನ ಗಾಜುಗಳು ಪುಡಿ ಪುಡಿಯಾಗಿದೆ. ಅದೃಷ್ಟವಶಾತ್ ಡಿ.ಕೆ. ಶಿವಕುಮಾರ್ ಹಾಗೂ ಹೆಲಿಕಾಪ್ಟರ್ ನಲ್ಲಿದ್ದ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ನ್ನು ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಡಿ.ಕೆ. ಶಿವಕುಮಾರ್ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಿದ್ದಾರೆ.

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...