ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆ ಕುರಿತು ಸಿನಿಮಾ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.
2025ರ ಫೆಬ್ರವರಿ 2ರಂದು ಸಿನಿಮಾ ಚಿತ್ರೀಕರಣ ಪ್ರಾರಂಭವಾಗಲಿದೆ. ಚಿತ್ರೀಕರಣಕ್ಕೆ ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ. ಕಾವೇರಿ ನಿವಾಸದಲ್ಲಿ ಸಿಎಂ ಭೇಟಿಯಾದ ನಿರ್ಮಾಪಕ ಬಾ.ಮಾ. ಹರೀಶ್, ಪಡಿತರ ವಿತರಕರ ಸಂಘದ ರಾಷ್ಟ್ರೀಯ ಅಧ್ಯಕ್ಷ ಟಿ. ಕೃಷ್ಣಪ್ಪ ನೇತೃತ್ವದ ನಿಯೋಗ ಆಹ್ವಾನ ನೀಡಿದೆ.
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ವಿತರಿಸುತ್ತಿದ್ದು, 5 ಕೆಜಿ ಅಕ್ಕಿ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತಿದೆ. ಈ ಜನಪ್ರಿಯ ಯೋಜನೆ ಆಧರಿಸಿ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ ಎನ್ನಲಾಗಿದೆ.