ಗ್ರಾಮಸ್ಥರ ತಂಡ ದೇವಾಲಯಕ್ಕೆ ಟ್ರಾಕ್ಟರ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಟ್ರಾಲಿ ಕೆರೆಗೆ ಉರುಳಿದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಲಕ್ನೋ ವ್ಯಾಪ್ತಿಯ Itaunja ಎಂಬಲ್ಲಿ ಈ ಘಟನೆ ನಡೆದಿದ್ದು, 37 ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದ್ದು, ಅವರುಗಳಿಗೆ ಯಾವುದೇ ಅಪಾಯವಾಗಿಲ್ಲ.
10 ಮಂದಿಯನ್ನು ಆಸ್ಪತ್ರೆಗೆ ಕರೆದೊಯ್ದ ವೇಳೆ ಈಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.