ಪೆಗಾಸಸ್ ಬಳಸಿ ಕೇಂದ್ರ ಸರ್ಕಾರ ಮೊಬೈಲ್ ಫೋನ್ ಕದ್ದಾಲಿಕೆ ಮಾಡಿದ ಎಂಬ ಆರೋಪದ ಅಡಿಯಲ್ಲಿ ಸ್ವತಂತ್ರ ತನಿಖೆಗೆ ಕೋರಿ ಹಲವರು ಕೋರಿದ್ದ ಅರ್ಜಿ ಸಂಬಂಧ ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ಪ್ರಕಟಿಸಿದೆ.
ಪ್ರಕರಣ ಸಂಬಂಧ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಆರ್.ವಿ. ರವೀಂದ್ರನ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವುದಾಗಿ ಆದೇಶ ನೀಡಿದೆ.
ಇಸ್ರೆಲ್ ಕಂಪನಿಯ ಗೂಢಚರ್ಯ ತಂತ್ರಾಂಶವಾದ ಪೆಗಾಸಸ್ ಬಳಸಿ ಕೇಂದ್ರ ಸರ್ಕಾರ ಪತ್ರಕರ್ತರು, ರಾಜಕಾರಣಿಗಳು ಸೇರಿದಂತೆ ಸಾಕಷ್ಟು ಗಣ್ಯರ ಫೋನ್ ಕದ್ದಾಲಿಕೆ ಮಾಡಿದೆ ಎಂಬ ಆರೋಪ ಎದುರಾಗಿತ್ತು.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ನ್ಯಾ. ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ನೇತೃತ್ವದ ಪೀಠ ಸೆಪ್ಟೆಂಬರ್ 13ರಂದು ವಿಚಾರಣೆಯನ್ನು ಪೂರೈಸಿತ್ತು. ಹಾಗೂ ಇಂದು ತೀರ್ಪನ್ನು ಕಾಯ್ದಿರಿಸಿತ್ತು. ಈ ಪ್ರಕರಣ ಸಂಬಂಧ ಸಮಿತಿಯೊಂದನ್ನು ರಚಿಸಿದ್ದ ಸುಪ್ರೀಂಕೋರ್ಟ್ ಈ ವರದಿಯನ್ನು ಆಧರಿಸಿ ತೀರ್ಪು ನೀಡಿದೆ.
ಈ ಪ್ರಕರಣವನ್ನು ಅಲ್ಲಗಳೆಯುವಂತಹ ಯಾವುದೇ ನಿರ್ದಿಷ್ಟ ಪ್ರತಿಕ್ರಿಯೆಗಳನ್ನು ಸುಪ್ರೀಂಕೋರ್ಟ್ ನೀಡಿಲ್ಲ. ಹೀಗಾಗಿ ಅರ್ಜಿದಾರರ ಆರೋಪಗಳನ್ನು ಒಪ್ಪಿಕೊಳ್ಳದೇ ನಮಗೆ ಬೇರೆ ಆಯ್ಕೆಗಳಿಲ್ಲ. ಆದ್ದರಿಂದ ಈ ಪ್ರಕರಣ ಸಂಬಂಧ ತನಿಖೆ ನಡೆಸಲು ನಾವು ಪರಿಣಿತರ ಸಮಿತಿಯನ್ನು ರಚಿಸುತ್ತೇವೆ ಹಾಗೂ ಇದರ ಮೇಲ್ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನೋಡಿಕೊಳ್ಳಲಿದೆ ಎಂದು ಹೇಳಿದೆ.
ಸುಪ್ರೀಂ ಕೋರ್ಟ್ ರಚಿಸಲಿರುವ ಈ ಸಮಿತಿಯಲ್ಲಿ ಮೂವರು ಸದಸ್ಯರು ಇರಲಿದ್ದಾರೆ. ಈ ಸಮಿತಿಗೆ ವರದಿಯನ್ನು ಸಲ್ಲಿಸಲು ಎಸ್ಐಟಿಗೆ ಕೋರ್ಟ್ 8 ವಾರಗಳ ಕಾಲಾವಕಾಶವನ್ನು ನೀಡಿದೆ.