alex Certify BREAKING: ಪೋಕ್ಸೋ ಪ್ರಕರಣ; ಮುರುಘಾಶ್ರೀ 3 ದಿನ ಪೊಲೀಸ್ ಕಸ್ಟಡಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪೋಕ್ಸೋ ಪ್ರಕರಣ; ಮುರುಘಾಶ್ರೀ 3 ದಿನ ಪೊಲೀಸ್ ಕಸ್ಟಡಿಗೆ

ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಚಿತ್ರದುರ್ಗ ಕೋರ್ಟ್ ಆದೇಶ ಹೊರಡಿಸಿದೆ.

ಮುರುಘಾ ಮಠದ ಶ್ರೀಗಳ ವಿರುದ್ಧ ದಾಖಲಾಗಿದ್ದ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರ ಕಸ್ಟಡಿ ಅವಧಿ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಪೊಲೀಸರು ಸ್ವಾಮೀಜಿಗಳನ್ನು ಜಿಲ್ಲಾ 2ನೇ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ವೇಳೆ 8 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ ಮುರುಘಾಶ್ರೀಗಳನ್ನು 3 ದಿನಗಳ ಕಾಲ ಅಂದರೆ ನ.5ರವರೆಗೆ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...