ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಐತಿಹಾಸಿಕ ರೋಡ್ ಶೋ ಆರಂಭವಾಗಿದೆ.
ರಾಜಭವನದಿಂದ ಮೇಖ್ರಿ ಸರ್ಕಲ್ ನ ಹೆಚ್ ಕ್ಯೂ ಟಿಸಿ ಹೆಲಿಪ್ಯಾಡ್ ಗೆ ಬಂದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಭನ್ನೇರುಘಟ್ಟ ಲೊಯಲಾ ಕಾಲೇಜು ಹೆಲಿಪ್ಯಾಡ್ ಗೆ ಬಂದಿಳಿದಿದ್ದು, ಅಲ್ಲಿಂದ ಜೆಪಿನಗರಕ್ಕೆ ಆಗಮಿಸಿದರು.
ಜೆಪಿನಗರದ ಸೋಮೇಶ್ವರ ಸಭಾಭವನದಿಂದ ರೋಡ್ ಶೋ ಆರಂಭವಾವಾಗಿದ್ದು, ಜೆಪಿ ನಗರದ ಬ್ರಿಗೇಡ್ ಮಿಲೇನಿಯಂ, ಸೌತ್ ಎಂಡ್ ಸರ್ಕಲ್, ಕೃಷ್ಣ ರಾವ್ ಪಾರ್ಕ್, ರಾಮಕೃಷ್ಣ ಆಶ್ರಮ, ಮಕ್ಕಳ ಕೂಟ, ಟೌನ್ ಹಾಲ್, ಕಾವೇರಿ ಭವನ, ಮೆಜೆಸ್ಟಿಕ್, ಮಾಗಡಿ ರೋಡ್, ಜಿಟಿ ವರ್ಲ್ಡ್ ಮಾಲ್, ಹೌಸಿಂಗ್ ಬೋರ್ಡ್, ಬಸವೇಶ್ವರ ನಗರ, ಶಂಕರ ಮಠ ಸರ್ಕಲ್, ಮೋದಿ ಆಸ್ಪತ್ರೆ ರಸ್ತೆ, ನವರಂಗ ಸರ್ಕಲ್, ಮಹಾಕವಿ ಕುವೆಂಪು ರಸ್ತೆ, ಮಲ್ಲೇಶ್ವರಂ ಸರ್ಕಲ್, ಸಂಪಿಗೆ ರಸ್ತೆ, ಸರ್ಕಲ್ ಮಾರಮ್ಮ ದೇವಸ್ಥಾನದವರೆಗೆ ಸಾಗಲಿದೆ.
ನಗರದ 13 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 23 ಕಿ.ಮೀ ರೋಡ್ ಶೋ ನಡೆಯಲಿದೆ.