ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್ ಐ ಎ(ರಾಷ್ಟ್ರೀಯ ತನಿಖಾ ದಳ)ಗೆ ಹಸ್ತಾಂತರಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ಜತೆ ಸಭೆ ಬಳಿಕ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ತನಿಖೆಯನ್ನು ಎನ್ ಐ ಎಗೆ ವಹಿಸಬೇಕು ಎಂದು ತೀರ್ಮಾನಿಸಲಾಗಿದೆ. ಪ್ರಕರಣದಲ್ಲಿ ಅಂತರಾಜ್ಯ ನಂಟಿರುವ ಕಾರಣ ಹಾಗೂ ಎರಡು ರಾಜ್ಯಗಳ ಗಡಿಭಾಗಗಳಲ್ಲಿ ನಡೆದಿರುವ ಪ್ರಕರಣವಾಗಿರುವುದರಿಂದ ಎನ್ ಐ ಎ ಗೆ ಹಸ್ತಾಂತರಿಸಲಾಗುವುದು ಎಂದರು.
ಹತ್ತು ದಿನಗಳಲ್ಲಿ ಮೂರು ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಧಾರ್ಮಿಕ ಮುಖಂಡರುಗಳ ಜತೆಯೂ ಸಭೆ ನಡೆಸಲಾಗುವುದು ಎಂದು ತಿಳಿಸಿದರು.