ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೆಶ ಹೊರಡಿಸಿದೆ.
ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ನೂರಾರು ಅಭ್ಯರ್ಥಿಗಳು ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಪತಿಯ ಜಾತಿ, ಆದಾಯ ಪ್ರಮಾಣ ಪತ್ರ, ತಂದೆಯ ಜಾತಿ, ಆದಾಯ ಪ್ರಮಾಣ ಪತ್ರ ನೀಡಲು ಶಿಕ್ಷಣ ಇಲಾಖೆ ತಿಳಿಸಿತ್ತು. ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಶಿಕ್ಷಣ ಇಲಾಖೆ ಕ್ರಮವನ್ನು ಪ್ರಶ್ನಿಸಿ ಹಲವು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.
ಶಿಕ್ಷಣ ಇಲಾಖೆಯ ನಿಯಮ ಕಾನೂನುಬಾಹಿರ ಎಂದು ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಏಕಸದಸ್ಯಪೀಠದ ನ್ಯಾ. ಎಂ. ನಾಗಪ್ರಸನ್ನ, ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಪಡಿಸಿ, ಹೊಸದಾಗಿ ಆಯ್ಕೆಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.