
ಶುಕ್ರವಾರದ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆಯಲ್ಲಿ ಮಸೀದಿಯೊಳಗೆ ಪ್ರಬಲ ಸ್ಫೋಟ ಸಂಭವಿಸಿದ ಪರಿಣಾಮ ಮೂವತ್ತು ಮಂದಿ ಸಾವನ್ನಪ್ಪಿ ಐವತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆಯು ಪಾಕಿಸ್ತಾನದ ಪೇಶಾವರದಲ್ಲಿ ಸಂಭವಿಸಿದೆ.
ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ ಜಾಮಿಯಾ ಮಸೀದಿಯಲ್ಲಿ ಮುಸ್ಲಿಮರು ಶುಕ್ರವಾರ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾವೀಗ ತುರ್ತು ಪರಿಸ್ಥಿತಿಯಲ್ಲಿದ್ದೇವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ನಾವು ಸ್ಫೋಟದ ಸ್ವರೂಪವನ್ನು ತನಿಖೆ ಮಾಡುತ್ತಿದ್ದೇವೆ. ಇದೊಂದು ಆತ್ಮಾಹುತಿ ದಾಳಿ ಇರಬಹುದು ಎಂದು ಪೊಲೀಸ್ ಅಧಿಕಾರಿ ಮೊಹಮ್ಮದ್ ಸಜ್ಜನ್ ಖಾನ್ ತಿಳಿಸಿದ್ದಾರೆ.