
ಈ ಕುರಿತಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಟ್ವಿಟರ್ ಬಳಕೆದಾರರು, ತಮಗಾದ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ.
ಈ ಹಿಂದೆಯೂ ಹಲವು ಬಾರಿ ಟ್ವಿಟರ್ ಸೇವೆಯಲ್ಲಿ ವ್ಯತ್ಯಯವಾಗಿದ್ದು, ತಾಂತ್ರಿಕ ದೋಷವೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ.
ಈ ಬಾರಿ ಟ್ವಿಟರ್ ಸೇವೆ ವ್ಯತ್ಯಯವಾಗಿರುವುದಕ್ಕೆ ಸಂಸ್ಥೆ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಎಲ್ಲಾ ಬಳಕೆದಾರರು ಈ ಸಮಸ್ಯೆಯನ್ನು ಎದುರಿಸಿಲ್ಲ ಎಂದು ಹೇಳಲಾಗಿದೆ.