![](https://kannadadunia.com/wp-content/uploads/2024/07/emergency.png)
ರಾಮನಗರ: ಬಾಯ್ಲರ್ ಸ್ಪೋಟಗೊಂಡು ಐವರಿಗೆ ಗಂಭೀರ ಗಾಯಗಳಾಗಿವೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ.
ಆರ್ಬಿಟ್ ಪವರ್ ಕಂಪನಿಯಲ್ಲಿ ಬಾಯ್ಲರ್ಸ್ ಸ್ಪೋಟಗೊಂಡು ದುರಂತ ಸಂಭವಿಸಿದೆ. ಉತ್ತರ ಭಾರತ ಮೂಲದ ಆಮ್ಲೇಶ್, ತರುಣ್, ಉಮೇಶ್ ಸಂತು, ಲಖನ್ ಗಾಯಗೊಂಡಿದ್ದಾರೆ. ಐವರು ಗಾಯಾಳುಗಳ ಪೈಕಿ ಮೂವರ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಬಿಡದಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.